ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಹೇಳುತ್ತಾ ದಲಿತರ ಮತಗಳನ್ನು ಪಡೆಯುತ್ತಿದ್ದಾರೆ – ಶ್ರೀನಿವಾಸ್ ಪ್ರಸಾದ್

ಮೈಸೂರು, ಮೇ 8- ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಹೇಳುತ್ತಾ ದಲಿತರ ಮತಗಳನ್ನು ಪಡೆಯುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಶ್ರೀನಿವಾಸ್ ಪ್ರಸಾದ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್‍ಗಾಂಧಿ ಅವರು ಹೇಳುತ್ತಾರೆ ಸಂವಿಧಾನವನ್ನು ನಾವು ಬದಲಾಯಿಸಲು ಬಿಡುವುದಿಲ್ಲ ಎಂದು. ಆದರೆ, ಬಿಜೆಪಿ ಎಲ್ಲಿಯೂ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಹೇಳಿಲ್ಲ. ಅನಂತ್‍ಕುಮಾರ್ ಹೆಗಡೆ ಅವರು ಹೇಳಿದ ಹೇಳಿಕೆಗೆ ಕ್ಷಮೆ ಕೇಳಿದ್ದಾರೆ. ಮೋದಿ ಅವರು ಸಂವಿಧಾನ ಭಾರತದ ಶ್ರೇಷ್ಠ ಗ್ರಂಥ ಎಂದು ಹೇಳುತ್ತಾರೆ. ಆದರೆ, ಕಾಂಗ್ರೆಸ್‍ನವರು ಈ ಬಗ್ಗೆ ಸುಳ್ಳು ವದಂತಿ ಹಬ್ಬಿಸಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಚಾಮುಂಡೇಶ್ವರಿಯಲ್ಲಿ ಗೆಲ್ಲುತ್ತೇನೆ ಎಂಬ ವಿಶ್ವಾಸವಿದ್ದರೆ ಬಾದಾಮಿಯಲ್ಲಿ ಏಕೆ ಸ್ಪರ್ಧಿಸಬೇಕಿತ್ತು ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯನವರು ಇದು ನನ್ನ ಕೊನೆಯ ಚುನಾವಣೆ ಎಂದು ಹೇಳಿಕೊಂಡು ಬರುತ್ತಿದ್ದಾರೆ. ಆದರೆ, ಅದೆಷ್ಟೋ ಬಾರಿ ಈ ರೀತಿ ಹೇಳಿರೆ ಎಂದು ವ್ಯಂಗ್ಯವಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ