ಹೆಬ್ಬಾಳದ ಮನೆಯೊಂದರಲ್ಲಿ ಚುನಾವಣಾಧಿಕಾರಿಗಳು ದಾಳಿ: 16,95,100ರೂ. ಪತ್ತೆ

ಬೆಂಗಳೂರು, ಮೇ 8- ಮನೆಯೊಂದರ ಮೇಲೆ ಚುನಾವಣಾಧಿಕಾರಿಗಳು ದಾಳಿ ಮಾಡಿ 16,95,100ರೂ. ಪತ್ತೆಹಚ್ಚಿದ್ದಾರೆ.
ಹೆಬ್ಬಾಳ ಪೆÇಲೀಸ್ ಠಾಣೆ ವ್ಯಾಪ್ತಿಯ ಸುಲ್ತಾನ್‍ಪಾಳ್ಯದ ನಿವಾಸಿ ಶಶಿಧರ್ ಎಂಬುವರ ಮನೆ ಮೇಲೆ ಚುನಾವಣಾಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ರಾತ್ರಿ ದಾಳಿ ಮಾಡಿ ಹಣ ವಶಪಡಿಸಿಕೊಂಡಿದ್ದಾರೆ.
ನಂತರ ಈ ಬಗ್ಗೆ ಐಟಿ ಅಧಿಕಾರಿಗಳಿಗೆ ತಿಳಿಸಿದ್ದು, ಐಟಿ ಅಧಿಕಾರಿಗಳು ಹಣವನ್ನು ವಶಕ್ಕೆ ತೆಗೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಈ ಬಗ್ಗೆ ಚುನಾವಣಾಧಿಕಾರಿಗಳು ಹೆಬ್ಬಾಳ ಪೆÇಲೀಸರಿಗೆ ದೂರು ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ