ಬೆಂಗಳೂರು, ಮೇ 9- ವೋಟರ್ ಐಡಿ ಅಕ್ರಮ ಸಂಗ್ರಹಣೆ ಪತ್ತೆಯಾದ ಹಿನ್ನೆಲೆಯಲ್ಲಿ ರಾಜರಾಜೇಶ್ವರಿನಗರದ ಚುನಾವಣೆಯನ್ನು ಮುಂದೂಡಬೇಕೆಂದು ಆಗ್ರಹಿಸಿ ಜೆಡಿಎಸ್ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.
ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. 10 ಸಾವಿರಕ್ಕೂ ಹೆಚ್ಚು ಮತದಾರರ ಗುರುತಿನ ಚೀಟಿಗಳ ಅಕ್ರಮ ಸಂಗ್ರಹಣೆ ಪತ್ತೆಯಾದ ಹಿನ್ನೆಲೆಯಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯಲು ಸಾಧ್ಯವಿಲ್ಲ ಎಂದು ಜೆಡಿಎಸ್ ವಕ್ತಾರ, ವಿಧಾನ ಪರಿಷತ್ ಸದಸ್ಯ ರಮೇಶ್ಬಾಬು ಅವರು ಪಕ್ಷದ ಪರವಾಗಿ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಚುನಾವಣೆ ಮುಂದೂಡಿಕೆಗೆ ಒತ್ತಾಯಿಸಿದ್ದಾರೆ.
1996ರಲ್ಲಿ ಥೇನ್ಸಿಂಗ್ ಪ್ರಕರಣವನ್ನು ಉಲ್ಲೇಖಿಸಿರುವ ರಮೇಶ್ಬಾಬು ಅವರು ಚುನಾವಣಾ ಅಕ್ರಮ ನಡೆದ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿತ್ತು. ಇದರನ್ವಯ ಆರ್ಆರ್ ನಗರ ಚುನಾವಣೆಯನ್ನು ಮುಂದೂಡಬೇಕೆಂದು ಅವರು ಹೇಳಿದ್ದಾರೆ.