ನೆಲಮಂಗಲ, ಮೇ 9- ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಹಣ ಹರಿದಾಡುವ ಸಾಧ್ಯತೆ ಮೇರೆಗೆ ನೆಲಮಂಗಲ ತಾಲ್ಲೂಕು ವ್ಯಾಪ್ತಿಯಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಭೀಮಾಶಂಕರ್ ಗುಳೇದ್ ತಿಳಿಸಿದ್ದಾರೆ. ಎಲ್ಲಾ ಚುನಾವಣಾ ಚೆಕ್ಪೆÇೀಸ್ಟ್ಗಳಲ್ಲಿ ಹೆಚ್ಚಿನ ನಿಗಾ ವಹಿಸಲು ಸೂಚನೆ ನೀಡಲಾಗಿದೆ. ಅಲ್ಲದೆ ಹೆಚ್ಚುವರಿ ವಿಚಕ್ಷಣಾ ದಳ ಸಿಬ್ಬಂದಿ ನೇಮಿಸಿ ತಪಾಸಣೆ ಮಾಡಲಾಗುತ್ತಿದೆ ಎಂದರು. ಎಲ್ಲಾ ಖಾಸಗಿ ವಾಹನಗಳ ತಪಾಸಣೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಅವರು ಪತ್ರಿಕೆಗೆ ತಿಳಿಸಿದ್ದಾರೆ.