ಹುಬ್ಬಳ್ಳಿ, ಮೇ 9- ಮತ ಪ್ರಚಾರ ನಡೆಸುತ್ತಿದ್ದ ವೇಳೆ ಎತ್ತಿನ ಬಂಡಿಯಿಂದ ಬಿದ್ದು ಗಾಯಗೊಂಡಿದ್ದ ಧಾರವಾಡ ಜಿಲ್ಲಾಧ್ಯಕ್ಷ ಎಚ್.ವಿ.ಮಾಡಳ್ಳಿ ಅವರು ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.
ನವಲಗುಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಲವಡಿಯ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಪರ ಮೇ 7ರಂದು ಪ್ರಚಾರ ನಡೆಸುತ್ತಿದ್ದ ವೇಳೆ ಎತ್ತಿನ ಬಂಡಿಯಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು. ಶಲವಡಿ ಕ್ಷೇತ್ರದ ಅಭ್ಯರ್ಥಿಗೂ ಕೂಡ ಸಣ್ಣಪುಟ್ಟ ಗಾಯಗಳಾಗಿದ್ದವು.
ತಕ್ಷಣವೇ ಮಾಡಳ್ಳಿ ಅವರನ್ನು ಹುಬ್ಬಳ್ಳಿಯ ಪೆÇೀರ್ಟಿಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಅವರು ಮೃತಪಟ್ಟಿದ್ದಾರೆ.
ಇಂದು ಸಂಜೆ 5 ಗಂಟೆಗೆ ನವಲಗುಂದ ತಾಲ್ಲೂಕಿನ ಹಳ್ಳಕೇರಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ವಿಧಾನ ಪರಿಷತ್ ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ , ಕಾಂಗ್ರೆಸ್ ಪಕ್ಷದ ಮುಖಂಡರಾದ ಮೋಹನ್ ಹೊಸಮನಿ, ಶರಣಪ್ಪ ಕೊಟಗಿ ಕಂಬನಿ ಮಿಡಿದಿದ್ದಾರೆ.