![bjp-bhavana12](http://kannada.vartamitra.com/wp-content/uploads/2018/05/bjp-bhavana12-678x349.jpg)
ಬೆಂಗಳೂರು:ಮೇ-10: ಸ್ಯಾಂಡಲ್ ವುಡ್ ನಟಿ, ಕಾಂಗ್ರೆಸ್ ಮುಖಂಡೆ ಭಾವನಾ ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ನೋಡಿಕೊಳ್ಳುತ್ತಿರುವ ಮುರುಳಿಧರ್ ರಾವ್ ಸಮ್ಮುಖದಲ್ಲಿ ಭಾವನಾ ಬಿಜೆಪಿಗೆ ಸೇರ್ಪಡೆಗೊಂಡರು.
ಭಾವನಾ ಅವರು ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಕಾಂಗ್ರೆಸ್ ನಿಂದ ಟಿಕೆಟ್ ಸಿಗದಿದ್ದರಿಂದ ಪಕ್ಷಕ್ಕೆ ರಾಜಿನಾಮೆ ನೀಡಿ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.