ಬೆಂಗಳೂರು, ಮೇ 10-ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜಾತ್ಯತೀತ ಪಕ್ಷಗಳನ್ನು ಬೆಂಬಲಿಸಬೇಕೆಂದು ಅಖಿಲ ಭಾರತೀಯ ದಲಿತ ಮತ್ತು ಕ್ರೈಸ್ತ ಸಂಘದ ರಾಷ್ಟ್ರೀಯ ಕಾರ್ಯದರ್ಶಿ ಜರುಸಲೇಂ ಮತ್ತಯ್ಯ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಜಾತ್ಯತೀತ ನಿಲುವಿಲ್ಲದ ಜೆಡಿಎಸ್ ಹಾಗೂ ಬಿಜೆಪಿ ಪಕ್ಷವನ್ನು ಧಿಕ್ಕರಿಸಿ ಕಾಂಗ್ರೆಸ್ ಮತ್ತು ಪಕ್ಷೇತರ ಅಭ್ಯರ್ಥಿಗಳಿಗೆ ಮತ ನೀಡಬೇಕೆಂದು ಮನವಿ ಮಾಡಿದ್ದಾರೆ.
ಬಿಜೆಪಿ ಪಕ್ಷವು ದಲಿತರು ಮತ್ತು ಅಲ್ಪಸಂಖ್ಯಾತರ ಮೇಲೆ ಹಾಗೂ ಅವರು ಸೇವಿಸುವ ಆಹಾರದ ಮೇಲೆ ನಿರ್ಬಂಧ ಹೇರುತ್ತಿದ್ದಾರೆ. ಅಲ್ಪಸಂಖ್ಯಾತರು ಮತ್ತು ದಲಿತರಿಗೆ ನಿಗದಿಪಡಿಸಿರುವ ಮೀಸಲಾತಿಯನ್ನು ತೆಗೆದುಹಾಕುತ್ತಿದ್ದಾರೆ ಎಂದು ಆರೋಪಿಸಿದರು.
ದೇಶದ ಕ್ರೈಸ್ತ ಸಮುದಾಯದ ಅಭಿವೃದ್ಧಿಗಾಗಿ ವಿದೇಶದಿಂದ ಬರುವ ಅನುದಾನವನ್ನು ತಡೆಹಿಡಿದಿದ್ದಾರೆ. ದಲಿತ ಕ್ರಿಶ್ಚಿಯನ್ ಸಮುದಾಯಕ್ಕೆ ನೀಡಿದ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ತೆಗೆದು ಹಾಕಲಾಗಿದೆ.
ಕೇಂದ್ರ ಸರ್ಕಾರದ ಸಚಿವರು ದಲಿತ ಮತ್ತು ಮುಸ್ಲಿಂ ಸಮುದಾಯದವರು ಪಾಕಿಸ್ತಾನಕ್ಕೋ ಅಥವಾ ಇಂಗ್ಲೆಂಡ್ಗೋ ಹೋಗಿ ಎನ್ನುತ್ತಿದ್ದಾರೆ. ಇಂತಹ ಪಕ್ಷವನ್ನು ಬೆಂಬಲಿಸಿದರೆ ದಲಿತರಿಗೂ, ಅಲ್ಪಸಂಖ್ಯಾತರಿಗೆ ತೊಂದರೆಯಾಗಲಿದೆ. ಆದ್ದರಿಂದ ಕಾಂಗ್ರೆಸ್ ಮತ್ತು ಪಕ್ಷೇತರ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.