
ಮಾಲೂರು, ಮೇ 10- ಕಳೆದ ಹತ್ತು ವರ್ಷಗಳಿಂದ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಮತದಾರರು ಹಾಗೂ ಕಾರ್ಯಕರ್ತರ ವಿಶ್ವಾಸ ಗಳಿಸಿದ್ದೇನೆ ಎಂದು ಮಾಲೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೃಷ್ಣಯ್ಯ ಶೆಟ್ಟಿ ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ಟೇಕಲ್ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಮತಯಾಚಿಸಿದ ಅವರು, ಹಲವಾರು ವರ್ಷಗಳಿಂದ ಕ್ಷೇತ್ರದ ಜನರಿಗೆ ಸೌಲಭ್ಯ ಕಲ್ಪಿಸಿ ಅಭಿವೃದ್ಧಿಯ ಪತದಲ್ಲಿ ಸಾಗಿದ್ದೇನೆ. ಮುಂದಿನ ವರ್ಷದಲ್ಲೂ ಅಭಿವೃದ್ಧಿಯ ಪರ್ವ ಮುಂದುವರೆಯಲಿದೆ ಎಂದರು.
ಬೂದಿಕೋಟೆ ಡ್ಯಾಮ್ ನೀರು ಬಳಸಿ ತಾಲ್ಲೂಕಿಗೆ ಹಾಗೂ ರೈತರಿಗೆ ನೀರಿನ ವ್ಯವಸ್ಥೆ ಕಲ್ಪಿಸಿದ್ದೇನೆ. ಯಡಿಯೂರಪ್ಪ ಅವರ ಅವಧಿಯಲ್ಲೇ ನೀರಿನ ಅನುಕೂಲತೆ ಕಲ್ಪಿಸಿದ್ದು, ಇನ್ನೂ ಸಾಕಷ್ಟು ಕಾಮಗಾರಿಗಳನ್ನು ಕೈಗೊಳ್ಳಲಿದ್ದೇನೆ. ಈ ಬಾರಿಯೂ ಜನ ನನ್ನ ಕೈ ಹಿಡಿದು ನಡೆಸಿದರೆ ಕ್ಷೇತ್ರ ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದು ತಿಳಿಸಿದರು.