ಬೆಂಗಳೂರು:ಮೇ-:11: ರಾಜ್ಯದ ವಿವಿಧ ಭಾಗಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಚುನಾವಣೆ ಮುನ್ನಾದಿನವೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮುಂದುವರಿಸಿ ಚುನಾವಣಾ ಅಭ್ಯರ್ಥಿಗಳಿಗೆ ಶಾಕ್ ನೀಡಿದ್ದಾರೆ.
ಬೆಳಗಿನ ಜಾವ 4 ಗಂಟೆಗೆ ಮೊಳಕಾಲ್ಮೂರಿನ ಹೆತ್ತಲ ಬೊಮ್ಮನಹಟ್ಟಿ ಗ್ರಾಮದ ಬಳಿ ಐಟಿ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿ 2.17 ಕೋಟಿ ರೂಪಾಯಿ ಹಣ ಜಪ್ತಿ ಮಾಡಿ, ಕಾರಿನ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಕಾರವಾರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಸತೀಶ್ ಸೈಲ್ ಅವರ ಆಪ್ತ ಮಂಗಲದಾಸ್ ಕಾಮತ್ ಅವರ ಅಂಕೋಲದ ಆವರ್ಸಾ ಗ್ರಾಮದ ನಿವಾಸದ ಮೇಲೆ ಐಟಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರಿನಲ್ಲೂ ದಾಳಿ ನಡೆಸಿದ ಬಗ್ಗೆ ವರದಿಯಾಗಿದೆ.
ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಯ ನವಯುಗ ಚೆಕ್ ಪೋಸ್ಟ್ ಬಳಿ ಇನ್ನೋವಾ ಕಾರಿನಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 17 ಲಕ್ಷ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಚಾಲಕ ನವೀನ್ ಕುಮಾರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.