
ಮೈಸೂರು:ಮೇ-11: ತಪ್ಪದೆ ಮತದಾನ ಮಾಡುವಂತೆ ಮನವಿ ಮಾಡಿದ ಯದುವಂಶದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮತದಾನದ ಬಗ್ಗೆ ಜನ ಜಾಗೃತಿ ಮೂಡಿಸಿದರು.
ನಮ್ಮ ಪೂರ್ವಜರ ಆಕಾಂಕ್ಷೆಗಳನ್ನು ಎತ್ತಿ ಹಿಡಿಯಬೇಕು. ನಮ್ಮ ಊರಿನ ಅನನ್ಯತೆ ಹಾಗೂ ಅಭಿವೃದ್ಧಿಗೆ ಪ್ರಜಾಪ್ರಭುತ್ವದ ಮಾರ್ಗವೇ ಮತದಾನ. ಮೇ 12ರಂದು ತಪ್ಪದೆ ಮತ ಚಲಾಯಿಸಿ ಎಂದು ಮನವಿ ಮಾಡಿದರು.
ಸಾಮಾಜಿಕ ಜಾಲತಾಣ ಫೇಸ್ಬುಕ್ ಹಾಗೂ ಇನ್ಸ್ಟಾಗ್ರಾಂ ಮೂಲಕವೂ ಯದುವೀರ್ ಮನವಿ ಮಾಡಿದ್ದಾರೆ.