ಮತಗಟ್ಟೆ ಸಿಬ್ಬಂದಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸದ ಹಿನ್ನೆಲೆಯಲ್ಲಿ ಆಕ್ರೋಶ

ಹಾಸನ, ಮೇ 11- ಚುನಾವಣೆ ನಿಮಿತ್ತ ಆಗಮಿಸಿದ್ದ ಮತಗಟ್ಟೆ ಸಿಬ್ಬಂದಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತವಾಗಿರುವ ಘಟನೆ ನಡೆದಿದೆ.
ಹಾಸನದ ಕಲಾಕಾಲೇಜು ಆವರಣದಲ್ಲಿ ಮತಗಟ್ಟೆಗೆ ತೆರಳುವ ಸಿಬ್ಬಂದಿಗೆ ಉಪಹಾರ ಸೇರಿದಂತೆ ಇನ್ನಿತರೆ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಆದರೆ, ಇಂದು ಬೆಳಗ್ಗೆ ಸ್ಥಳದಲ್ಲಿ ಜಮಾಯಿಸಿದ್ದ ಸಿಬ್ಬಂದಿಗೆ ಸೂಕ್ತ ವ್ಯವಸ್ಥೆ ಇಲ್ಲದೆ ನೀರು, ಉಪಹಾರ ನೀಡಲು ವಿಳಂಬವಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ನಿಯೋಜಿತ ಸ್ಥಳದಲ್ಲಿ ಸೂಕ್ತ ವ್ಯವಸ್ಥೆ ಒದಗಿಸದ ಚುನಾವಣಾಧಿಕಾರಿಗಳ ವಿರುದ್ಧ ಸಿಬ್ಬಂದಿ ಅಸಮಾಧಾನ ವ್ಯಕ್ತಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ