ಮತದಾರರಿಗೆ ಹಂಚಲು ತಂದ ಭಾರೀ ಪ್ರಮಾಣದ ಮದ್ಯವನ್ನು ವಶಪಡಿಸಿಕೊಂದ ಅಬಕಾರಿ ಅಧಿಕಾರಿಗಳು

ಬೆಂಗಳೂರು, ಮೇ 11- ರಾಜ್ಯದ ವಿವಿಧೆಡೆ ದಾಳಿ ನಡೆಸಿರುವ ಅಬಕಾರಿ ಅಧಿಕಾರಿಗಳು ಮತದಾರರಿಗೆ ಹಂಚಲೆಂದು ಸಂಗ್ರಹಿಸಿದ್ದ ಭಾರೀ ಪ್ರಮಾಣದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಹೊಳೆನರಸೀಪುರ ತಾಲೂಕು ಅಗ್ರಹಾರ ಗೇಟ್ ಬಳಿ 150 ಬಾಕ್ಸ್ ಮದ್ಯವನ್ನು ಪೆÇಲೀಸ್ ಮತ್ತು ಅಬಕಾರಿ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.
ಹಾಸನ ಹೊರವಲಯದ ಕೈಗಾರಿಕಾ ಬಡಾವಣೆಯಲ್ಲಿ ಗ್ರಾನೈಟ್ ಕೊಠಡಿಯೊಂದರಲ್ಲಿ ಸಂಗ್ರಹಿಸಿದ್ದ 50ಕ್ಕೂ ಹೆಚ್ಚು ಬಾಕ್ಸ್‍ಗಳನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ.
ರಾಯಚೂರು ಜಿಲ್ಲೆ, ಲಿಂಗಸಗೂರು ತಾಲೂಕು, ಕುಟ್ಟಿ ಗ್ರಾಮದಲ್ಲಿ ಮದ್ಯ ಮಾರಾಟದ ಅಂಗಡಿ ಮೇಲೆ ದಾಳಿ ನಡೆಸಿದ ಪೆÇಲೀಸರು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 1,43,000 ಬೆಲೆ ಬಾಳುವ 376 ಲೀಟರ್ ಅಕ್ರಮ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.
ಪಿಎಸ್‍ಐ ಮಹಮ್ಮದ್ ರಫೀಕ್ ನೇತೃತ್ವದ ತಂಡ ದಾಳಿ ನಡೆಸಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ರವಿಕುಮಾರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದೇ ರೀತಿ ಹಲವೆಡೆ ದಾಳಿ ನಡೆಸಿರುವ ಅಬಕಾರಿ ಅಧಿಕಾರಿಗಳು, ಪೆÇಲೀಸರು ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿರುವುದು ವರದಿಯಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ