
ಬೆಂಗಳೂರು,ಮೇ11- ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಗುರುತಿನ ಚೀಟಿ ಸಂಗ್ರಹದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಪೆÇಲೀಸರು ತನಿಖೆ ಕೈಗೊಂಡಿದ್ದು , ಎಫ್‍ಐಆರ್ ದಾಖಲಾಗಿರುವುದಕ್ಕೂ ಆರೋಪ ಸಾಬೀತಾಗುವುದಕ್ಕೂ ವ್ಯತ್ಯಾಸವಿದೆ. ಈ ಹಂತದಲ್ಲಿ ನಾವು ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಆರ್.ಆರ್.ನಗರದ ಗುರುತಿನ ಚೀಟಿ ಸಂಗ್ರಹದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗವೇ ಅಂತಿಮ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ.