ಬೆಂಗಳೂರು, ಮೇ 11-ಚುನಾವಣಾ ಮುನ್ನ ದಿನವಾದ ಇಂದೂ ಕೂಡ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹಲವೆಡೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ.
ನೈಸ್ ಸಂಸ್ಥೆ ಮುಖ್ಯಸ್ಥ, ಬೀದರ್ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿ, ಕಾರವಾರದ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಶೈಲ್ ಅವರ ಆಪ್ತ ಉದ್ಯಮಿ ಮಂಗಲದಾಸ್ ಕಾಮತ್, ಯಲಹಂಕದ ಜೆಡಿಎಸ್ ಮುಖಂಡರೊಬ್ಬರು ಸೇರಿದಂತೆ ಹಲವೆಡೆ ಐಟಿ ಅಧಿಕಾರಿಗಳು ತಡರಾತ್ರಿ ಹಾಗೂ ಬೆಳಗ್ಗೆ ದಾಳಿ ನಡೆಸಿದ್ದಾರೆ.
ಅಶೋಕ್ ಖೇಣಿ ಅವರ ಬೀದರ್ ನಿವಾಸ, ಬೆಂಗಳೂರಿನ ಕಚೇರಿ, ನಿವಾಸಗಳ ಮೇಲೆ ಏಕಕಾಲದಲ್ಲಿ 10 ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದೆ.
ಕಾರವಾರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಪ್ತರಾದ ಉದ್ಯಮಿ ಮಂಗಲದಾಸ್ ಕಾಮತ್ ಅವರ ಮನೆ ಮೇಲೆ ಐಟಿ ದಾಳಿ ನಡೆಸಲಾಗಿದೆ. ಅಂಕೋಲಾದ ಅವಾರ್ಸಿಕ ಗ್ರಾಮದಲ್ಲಿರುವ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.