ಒಂದೇ ಬೈಕ್‍ನಲ್ಲಿ ನಾಲ್ವರು ತೆರಳಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಇಬ್ಬರು ಸವಾರರು ಮೃತ:

ಬೆಳಗಾವಿ,ಮೇ 11- ಒಂದೇ ಬೈಕ್‍ನಲ್ಲಿ ನಾಲ್ವರು ತೆರಳಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಇಬ್ಬರು ಸವಾರರು ಸಾವನ್ನಪ್ಪಿ, ಮತ್ತಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಸಂಕೇಶ್ವರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಗೊಟ್ಟೂರು ಗ್ರಾಮದ ನಿವಾಸಿ ಪ್ರದೀಪ್ ಬಡಿಗೇರ, ವಿಶಾಲ ಶೇಖನವರ್ ಮೃತಪಟ್ಟ ದುರ್ದೈವಿಗಳು. ಇಂದು ಬೆಳಗ್ಗೆ ಪ್ರದೀಪ್ ಮತ್ತು ವಿಶಾಲ ಸೇರಿ ನಾಲ್ವರು ಒಂದೇ ಬೈಕ್‍ನಲ್ಲಿ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಂಕೇಶ್ವರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ