ಮತಗಟ್ಟೆಗಳ ಬಳಿ ವಾಮಾಚಾರ!

ತುಮಕೂರು, ಮೇ 11- ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಗುಬ್ಬಿ ವಿಧಾನಸಭಾ ಕ್ಷೇತ್ರದ ವಿವಿಧ ಮತಗಟ್ಟೆಗಳ ಬಳಿ ವಾಮಾಚಾರ ನಡೆಸಲು ಯತ್ನಿಸಿದ ಇಬ್ಬರನ್ನು ಗ್ರಾಮಸ್ಥರು ಹಿಡಿದು ಪೆÇಲೀಸರಿಗೆ ಒಪ್ಪಿಸಿದ್ದಾರೆ.
ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣ ಬೇಸರಗೊಂಡಿದ್ದ ದಿಲೀಪ್ ಎಂಬುವರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಇವರಿಗೆ ಜೆಡಿಎಸ್, ಕಾಂಗ್ರೆಸ್ ಬಿಜೆಪಿಗೆ ತೀವ್ರ ಪೈಪೆÇೀಟಿ ನೀಡುತ್ತಿರುವುದು ಮನಗಂಡ ದಿಲೀಪ್ ಬೆಂಬಲಿಗರು ಹೇಗಾದರೂ ದಿಲೀಪ್‍ರನ್ನು ಗೆಲ್ಲಿಸಿಕೊಳ್ಳಬೇಕೆಂದು ಎಲ್ಲಾ ಕ್ಷೇತ್ರದ ಮತಗಟ್ಟೆಗಳಲ್ಲಿ ಅರಿಶಿಣ, ಕುಂಕುಮ ಬೆರೆಸಿದ ಅಕ್ಕಿ, ನಿಂಬೆಹಣ್ಣು, ಹೂವು ಹಾಕುತ್ತಿದ್ದರು.
ನೆಲ್ಲೂರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಚೇರಿ ಮುಂಭಾಗ ವಾಮಾಚಾರ ನಡೆಸಲು ನಾಲ್ವರು ಸಿದ್ಧತೆ ಮಾಡಿಕೊಂಡಿದ್ದರು. ಇದನ್ನು ಗಮನಿಸಿದ ಗ್ರಾಮಸ್ಥರು ಇಬ್ಬರನ್ನು ಹಿಡಿದು ಪೆÇಲೀಸರಿಗೆ ಒಪ್ಪಿಸಿದ್ದಾರೆ. ಮತ್ತಿಬ್ಬರು ಪರಾರಿಯಾಗಿದ್ದಾರೆ.
ಒಟ್ಟಾರೆ ದಿಲೀಪ್ ಅವರ ಗೆಲುವು ಬಯಸಿ ಕಿಡಿಗೇಡಿಗಳು ವಾಮಾಚಾರ ಮಾಡಿದ್ದಾರೆ ಎಂದು ಗ್ರಾಮಸ್ಥರು ಮಾತನಾಡಿಕೊಳ್ಳುತ್ತಿದ್ದಾರೆ. ಈ ಸಂಬಂಧ ಚೇಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ