ಮತದಾರರನ್ನು ಕರೆದೊಯ್ಯುತ್ತಿದ್ದಾರೆಂಬ ಆರೋಪದಡಿ 20 ಆಟೋಗಳನ್ನು ಚುನಾವಣಾ ಅಧಿಕಾರಿಗಳು ವಶ:

ರಾಯಚೂರು, ಮೇ 12- ಮತದಾರರನ್ನು ಕರೆದೊಯ್ಯುತ್ತಿದ್ದಾರೆಂಬ ಆರೋಪದಡಿ 20 ಆಟೋಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಮಸ್ಕಿ ಪಟ್ಟಣದಲ್ಲಿ ನಡೆದಿದೆ. ವಶಕ್ಕೆ ಪಡೆದಿರುವ 20 ಆಟೋಗಳು ಆಂಧ್ರ ರಾಜ್ಯದ ನೋಂದಣಿ ಸಂಖ್ಯೆ ಹೊಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿವೆ. ಅಭ್ಯರ್ಥಿ ಬಸವನಗೌಡ ತುರುವೇಹಾಳ್ ಕಡೆಯವರು ಮತದಾರರನ್ನು ಮತಗಟ್ಟೆಗೆ ಕರೆದೊಯ್ಯುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ