ಮೈಸೂರು ಮಹರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್​ ರಿಂದ ಮತದಾನ

ಮೈಸೂರು:ಮೇ-12: ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್​ ಮೊದಲ ಬಾರಿಗೆ ತಮ್ಮ ಹಕ್ಕು ಚಲಾಯಿಸಿದರು. ಮೈಸೂರಿನ ಶ್ರೀಕಾಂತ ಕಾಲೇಜಿನಲ್ಲಿ ಇರುವ ಮತಗಟ್ಟೆ ಸಂಖ್ಯೆ 148ರಲ್ಲಿ ಸುಮಾರು 30 ನಿಮಿಷ ಸರತಿ ಸಾಲಿನಲ್ಲಿ ನಿಂತು ಮತ ಹಾಕಿದರು.

ಮತದಾನದ ಬಳಿಕ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಅಮೆರಿಕದಲ್ಲಿದ್ದೆ. ಅದಕ್ಕೂ ಮೊದಲಿನ ಚುನಾವಣೆಯಲ್ಲಿ ಮೈನರ್​ ಆಗಿದ್ದೆ. ಈಗ ಒಬ್ಬ ಸಾಮಾನ್ಯ ಪ್ರಜೆಯಾಗಿ ಆಗಮಿಸಿ ಮತದಾನ ಮಾಡಿದ್ದೇನೆ. ಪತ್ನಿ ತ್ರಿಷಿಕಾ ಸ್ವಲ್ಪ ತಡವಾಗಿ ಮತಚಲಾಯಿಸಲಿದ್ದಾರೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ