ಬೆಂಗಳೂರು: ಮೇ-12: ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿರುಸಿನ ಮತದಾನವಾಗುತ್ತಿದ್ದು, ಬೆಳಿಗ್ಗೆ 11 ಗಂಟೆವರೆಗೆ ರಾಜ್ಯಾದ್ಯಂತ ಶೇ. 24ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಯಿತಾದರೂ, ಹಲವೆಡೆ ಮತಯಂತ್ರಗಳು ಕೈಕೊಟ್ಟ ಪರಿಣಾಮ ಮತದಾನ ವಿಳಂಬವಾಯಿತು. ಇನ್ನು ಹಲವು ಮತಗಟ್ಟೆಗಳಲ್ಲಿ ವಿದ್ಯುತ್ ಕೈ ಕೊಟ್ಟ ಕಾರಣ ಚುನಾವಣಾ ಸಿಬ್ಬಂದಿ ಗೊಂದಲಕ್ಕೀಡಾದರು.
ಇನ್ನು ಬೆಂಗಳೂರಿನ ಎರಡು ಕಡೆ ನಕಲಿ ಮತದಾನ ಆರೋಪ ಹಿನ್ನೆಲೆಯಲ್ಲಿ ಬಸವನಗುಡಿ ಕ್ಷೇತ್ರದ ಶ್ರೀನಗರದಲ್ಲಿ ಶ್ರೀನಗರದಿಂದ ನಾಗಮಂಗಲ ಕ್ಷೇತ್ರಕ್ಕೆ ತೆರಳುತ್ತಿದ್ದ ಬಸ್ ಅಡ್ಡಗಟ್ಟಿ ಸ್ಥಳೀಯರು ಗಲಾಟೆ ಮಾಡಿದ್ದಾರೆ.
ಬೆಳಿಗ್ಗೆ 9 ಗಂಟೆ ವರೆಗೆ ಶೇ.11ರಷ್ಟು ಮತಾದಾನವಾಗಿದ್ದು, ಇತ್ತೀಚಿನ ಮಾಹಿತಿ ಪ್ರಕಾರ 11 ಗಂಟೆವರೆಗೆ ರಾಜ್ಯಾದ್ಯಂತ ಶೇ.24ರಷ್ಟು ಮತದಾನವಾಗಿದೆ. ಇನ್ನು ಬೆಳಗಿನಿಂದಲೇ ಮತಗಟ್ಟೆಗೆ ಆಗಮಿಸುತ್ತಿರುವ ಮತದಾರರು ಸರತಿ ಸಾಲಲ್ಲಿ ನಿಂತು ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ.