
ದಕ್ಷಿಣ ಕನ್ನಡ, ಮೇ 12- ಮತದಾನ ಮಾಡಲು ಬಂದಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮತಗಟ್ಟೆ ಬಳಿಯೇ ಸಾವನ್ನಪ್ಪಿರುವ ಘಟನೆ ವೇಣೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಜಾರಿಗೆದಡಿ ನಿವಾಸಿ ಅಣ್ಣಿ ಆಚಾರ್ಯ (70) ಮೃತಪಟ್ಟ ವ್ಯಕ್ತಿ.
ಮತದಾನದ ಹಕ್ಕನ್ನು ಚಲಾಯಿಸಲು ಬೆಳ್ಳಂಬೆಳಗ್ಗೆಯೇ ಮತಗಟ್ಟೆಗೆ ಆಗಮಿಸಿದ ಅಣ್ಣಿ ಆಚಾರ್ಯ ಅವರು ಎದೆನೋವಿನಿಂದ ಇದ್ದಕ್ಕಿದ್ದಂತೆ ಕುಸಿದುಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವೇಣೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.