ಪ್ಲೇವುಡ್ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ತಗಲಿ ಲಕ್ಷಾಂತರ ರೂ. ನಷ್ಟ:

ತುರುವೇಕೆರೆ, ಮೇ 12- ತಾಲ್ಲೂಕಿನ ಕಲ್ಕೆರೆ ಗೇಟ್ ಬಳಿಯಲ್ಲಿದ್ದ ಪ್ಲೇವುಡ್ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ತಗಲಿ ಲಕ್ಷಾಂತರ ರೂ. ನಷ್ಟವಾಗಿರುವ ಘಟನೆ ನಡೆದಿದೆ.
ಪಟ್ಟಣದ ಕೃಷ್ಣಪ್ಪ ಎಂಬುವರಿಗೆ ಸೇರಿದ ಪ್ಲೇವುಡ್ ಕಾರ್ಖಾನೆ ನಡೆಸುತ್ತಿದ್ದರು. ಆಕಸ್ಮಿಕವಾಗಿ ಬೆಂಕಿ ತಗಲಿದ್ದು, ಕೂಡಲೇ 2 ಅಗ್ನಿ ಶಾಮಕದಳ ಆಗಮಿಸಿ ಸತತ 4 ಗಂಟೆಗಳ ಕಾಲ ಶ್ರಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.
ಪ್ಲೇವುಡ್ ಕಾರ್ಖಾನೆ ಸಂಪೂರ್ಣ ಸುಟ್ಟು ಹೋಗಿದ್ದು, ಕಾರ್ಖಾನೆಯಲ್ಲಿಟ್ಟಿದ್ದ ಪ್ಲೇವುಡ್‍ಗಳು ಸಹ ಸುಟ್ಟು ಹೋಗಿವೆ. ಇದರಿಂದ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ