ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಘರ್ಷಣೆ

ಬೆಂಗಳೂರು, ಮೇ 12- ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಘರ್ಷಣೆಯಲ್ಲಿ ಹಂಪಿನಗರ ವಾರ್ಡ್‍ನ ಬಿಬಿಎಂಪಿ ಸದಸ್ಯ ಆನಂದ್ ಹೊಸೂರ್ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ವಿಜಯನಗರ ವಿಧಾನಸಭಾ ಕ್ಷೇತ್ರದ ಆರ್‍ಪಿಸಿ ಬಡಾವಣೆಯಲ್ಲಿರುವ ವಿರೂಪಾಕ್ಷೇಶ್ವರ ಸ್ವಾಮಿ ಎಜುಕೇಷನ್ ಸೊಸೈಟಿಯಲ್ಲಿ ಸ್ಥಾಪಿಸಲಾಗಿರುವ 135, 136, 137 ಮತ್ತು 138 ಮತಗಟ್ಟೆ ಸಮೀಪ ಈ ಘಟನೆ ನಡೆದಿದೆ.

ಮತಗಟ್ಟೆಯ ನೂರು ಮೀಟರ್ ಗಡಿಯಲ್ಲಿ ಕೆನಾಪಿ ಹಾಕುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು.
ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಹಂಪಿನಗರ ವಾರ್ಡ್‍ನ ಬಿಜೆಪಿ ಬಿಬಿಎಂಪಿ ಸದಸ್ಯ ಆನಂದ್‍ಹೊಸೂರ್ ಎಂಬುವವರ ಮೇಲೆ ಕಾಂಗ್ರೆಸ್ ಕಾರ್ಯಕರ್ತ ಆನಂದ್ ಎಂಬುವವರು ಹಲ್ಲೆ ನಡೆಸಿದ್ದಾರೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ರವಿ ಡಿ.ಚನ್ನಣ್ಣನವರ್ ತಿಳಿಸಿದ್ದಾರೆ.
ಘರ್ಷಣೆಯಲ್ಲಿ ಆನಂದ್‍ಹೊಸೂರ್ ಅವರಿಗೆ ರಕ್ತಗಾಯವಾಗಿದ್ದು, ಪೆÇಲೀಸರು ಹೊಯ್ಸಳ ವಾಹನದಲ್ಲಿ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಬಿಜೆಪಿ ಅಭ್ಯರ್ಥಿ ಎಚ್.ರವೀಂದ್ರ ಮತ್ತಿತರ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮುಂದಾದಾಗ ಪೆÇಲೀಸರು ಪ್ರತಿಭಟನಾಕಾರರ ಮನವೊಲಿಸಿ ವಾಪಸ್ ಕಳುಹಿಸುವಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಮತದಾನ ಶಾಂತಿಯುತವಾಗಿ ಮುಂದುವರಿದಿದೆ.
ಬಿಬಿಎಂಪಿ ಸದಸ್ಯ ಆನಂದ್‍ಹೊಸೂರ್ ಅವರ ಮೇಲೆ ಹಲ್ಲೆ ನಡೆಸಿರುವ ಕುರಿತಂತೆ ದೂರು ಬಂದರೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ರವಿ ಡಿ.ಚನ್ನಣ್ಣನವರ್ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ