ಸಣ್ಣಪುಟ್ಟ ಘಟನೆ ಹೊರತುಪಡಿಸಿದರೆ ಬಹುತೇಕ ಶಾಂತಿಯುತವಾಗಿ ನಡೆದ ಮತದಾನ

Hubli: People in queue to caste their vote for Karnataka assembly elections at Rotary Deaf School booth in Hubli on Sunday. PTI Photo(PTI5_5_2013_000037B)

ಬೆಂಗಳೂರು, ಮೇ 12- ರಾಜ್ಯದಲ್ಲಿ ಮತದಾನ ಶಾಂತಿಯುತವಾಗಿ ನಡೆದಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೆÇಲೀಸ್ ಮಹಾನಿರ್ದೇಶಕರಾದ ಕಮಲ್‍ಪಂಥ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಲಲ್ಲಿ ಸಣ್ಣಪುಟ್ಟ ಘಟನೆ ಹೊರತುಪಡಿಸಿದಂತೆ ಎಲ್ಲಿಯೂ ಯಾವುದೇ ರೀತಿಯ ಅಹಿತಕರ ಘಟನೆಗಳು ಈತನಕ ನಡೆದಿಲ್ಲ ಎಂದು ಹೇಳಿದರು.

ಮತಗಟ್ಟೆಗಳ ಸಮೀಪ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಸ್ಥಳೀಯ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ ಎಂದರು.
ಆರಂಭದಲ್ಲಿ ಕೆಲವು ಮತಗಟ್ಟೆಗಳ ಮತಯಂತ್ರಗಳಲ್ಲಿ ಲೋಪದೋಷ ಕಂಡುಬಂದ ಹಿನ್ನೆಲೆಯಲ್ಲಿ ಮತದಾನ ತಡವಾಗಿ ಶುರುವಾಯಿತು. ಈಗ ಎಲ್ಲಾ ಮತಗಟ್ಟೆಗಳಲ್ಲೂ ಸುಲಲಿತವಾಗಿ ಮತದಾನ ನಡೆಯುತ್ತಿದೆ ಎಂದು ಅವರು ಹೇಳಿದರು.
ಮುಕ್ತ ಹಾಗೂ ಶಾಂತಿಯುತ ಮತದಾನಕ್ಕೆ ನಾವು ಎಲ್ಲಾ ಕ್ರಮ ಕೈಗೊಂಡಿದ್ದೇವೆ. ಸ್ಥಳೀಯ ಪೆÇಲೀಸರ ಜತೆಗೆ ನೆರೆ ರಾಜ್ಯಗಳ ಪೆÇಲೀಸರು ಹಾಗೂ ಕೇಂದ್ರ ಪಡೆಗಳನ್ನು ಸಹ ಬಂದೋಬಸ್ತ್‍ಗಾಗಿ ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ