ಬಾಗಲಕೋಟೆ, ಮೇ 12- ಮತದಾರರ ಸೋಗಿನಲ್ಲಿದ್ದ ವಿದ್ಯಾರ್ಥಿಗಳು ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಸಿಕ್ಕಿಬಿದ್ದಿದ್ದಾರೆ.
ಬಿಜೆಪಿ ಅಭ್ಯರ್ಥಿ ವೀರಣ್ಣಚರಂತಿಮಠ ಅವರು ಕಾರ್ಯಾಧ್ಯಕ್ಷರಾಗಿರುವ ಕಾಲೇಜಿನ ವಿದ್ಯಾರ್ಥಿಗಳು ಮತದಾನ ಮಾಡಲು ಬಂದ ಸಂದರ್ಭದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.
ನಕಲಿ ಮತದಾರರನ್ನು ಬಿಜೆಪಿ ಅಭ್ಯರ್ಥಿ ವೀರಣ್ಣಚರಂತಿಮಠ ಅವರು ಕರೆತಂದಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು.
ಈ ಸಂಬಂಧ ಕಾಂಗ್ರೆಸ್ ಕಾರ್ಯಕರ್ತರು ದೂರು ಸಲ್ಲಿಸಿದ್ದಾರೆ.