
ಬೆಳಗಾವಿ, ಮೇ 12-ಕೊಲೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ ಘಟನೆ ಬೈಲಹೊಂಗಲ ತಾಲೂಕಿನಲ್ಲಿ ನಡೆದಿದೆ.
ಮಾರ್ಚ್ 6ರಂದು ಕಿತ್ತೂರು ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ನಾಲ್ಕು ತಿಂಗಳ ಗರ್ಭಿಣಿ ಗೀತಾ ಕೊಲೆ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಗೀತಾ ಪತಿ ಸುರೇಶ ಬಂಧನವಾಗಿತ್ತು. ಕೊಲೆಗೆ ಸುರೇಶ ಅವರ ತಂದೆ, ತಾಯಿ ಕೂಡ ಕಾರಣವಾಗಿದ್ದು, ಅವರನ್ನು ಬಂಧಿಸುವಂತೆ ಗೀತಾ ಅವರ ಸಂಬಂಧಿಕರು ಮೊದಲಿನಿಂದಲೂ ಒತ್ತಾಯಿಸುತ್ತಿದ್ದಾರೆ.
ಇಂದು ಬೆಳಗ್ಗೆ ಮತಗಟ್ಟೆ ಬಳಿ ಜಮಾಯಿಸಿದ ಗ್ರಾಮಸ್ಥರು ಆರೋಪಿಗಳನ್ನು ಬಂಧಿಸುವವರೆಗೂ ಮತದಾನ ಮಾಡುವುದಿಲ್ಲ ಎಂದು ಬಹಿಷ್ಕಾರ ಹಾಕಿದರು.
ಆರೋಪಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವುದಾಗಿ ಹೇಳಿ ಪೆÇಲೀಸರು ಗ್ರಾಮಸ್ಥರ ಮನವೊಲಿಸಲು ಹರಸಾಹಸ ನಡೆಸಿದರು.