ಬಿರುಸಿನ ಮತದಾನ: ಬೆಳಗ್ಗೆ 11ರ ಹೊತ್ತಿಗೆ ಶೇ.24 ಮತದಾನ

ಬೆಂಗಳೂರು,ಮೇ 12

ರಾಜ್ಯಾದ್ಯಂತ ನಡೆಯುತ್ತಿರುವ ಮತದಾನ  ಪ್ರಕ್ರಿಯೆ ಬಿರುಸಿನಿಂದ ಸಾಗಿದ್ದು, ಬೆಳಗ್ಗೆ 11 ಗಂಟೆ ಹೊತ್ತಿಗೆ ಶೇ.24ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಕರ್ನಾಟಕ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿರುಸಿನ ಮತದಾನವಾಗುತ್ತಿದ್ದು, ಬೆಳಗ್ಗೆ 9.15ರ ಹೊತ್ತಿಗೆ ರಾಜ್ಯಾದ್ಯಂತ ಶೇ. 11ರಷ್ಟು ಮತದಾನವಾಗಿತ್ತು ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಯಿತಾದರೂ, ಹಲವೆಡೆ ಮತಯಂತ್ರಗಳು ಕೈಕೊಟ್ಟ ಪರಿಣಾಮ ಮತದಾನ ತಡವಾಯಿತು. ಇನ್ನು ಹಲವು ಮತಗಟ್ಟೆಗಳಲ್ಲಿ ವಿದ್ಯುತ್ ಕೈ ಕೊಟ್ಟ ಕಾರಣ ಚುನಾವಣಾ ಸಿಬ್ಬಂದಿ ಗೊಂದಲಕ್ಕೀಡಾದರು.  ಇನ್ನು ಬೆಂಗಳೂರಿನ ಎರಡು ಕಡೆ ನಕಲಿ ಮತದಾನ ಆರೋಪ ಹಿನ್ನೆಲೆಯಲ್ಲಿ ಬಸವನಗುಡಿ ಕ್ಷೇತ್ರದ ಶ್ರೀನಗರದಲ್ಲಿ ಶ್ರೀನಗರದಿಂದ ನಾಗಮಂಗಲ ಕ್ಷೇತ್ರಕ್ಕೆ ತೆರಳುತ್ತಿದ್ದ ಬಸ್​ ಅಡ್ಡಗಟ್ಟಿ ಸ್ಥಳೀಯರು ಗಲಾಟೆ ಮಾಡಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ