ಯಾದಗಿರಿ, ಮೇ 13- ಹಳೇ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಸುರಪುರ ತಾಲ್ಲೂಕಿನ ಅಗರ್ತಿ ಗ್ರಾಮದಲ್ಲಿ ನಡೆದಿದೆ.
ಬೈಕ್ನಲ್ಲಿ ಹೋಗುತ್ತಿದ್ದ ನಂದಪ್ಪ ದೊಡ್ಡಮನಿ ಅವರನ್ನು ಹಿಂಬಾಲಿಸಿದ ದುಷ್ಕರ್ಮಿಗಳು ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ತಡರಾತ್ರಿ ಈ ಘಟನೆ ನಡೆದಿದ್ದು , ಘಟನೆಯಿಂದಾಗಿ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಬೈಕ್ನಲ್ಲಿ ಬರುವಾಗ ಸುಮಾರು 10 ಮಂದಿ ಇವರನ್ನು ಅಡ್ಡಗಟ್ಟಿದ್ದಾರೆ. ಹಣ ಕೊಡುವಂತೆ ಬೆದರಿಸಿದ್ದಾರೆ. ಅದಕ್ಕೆ ಒಪ್ಪದಿದ್ದಾಗ ಜಗಳ ತೆಗೆದು ಹತ್ಯೆ ಮಾಡಿರಬಹುದೆಂದು ಶಂಕೆ ವ್ಯಕ್ತವಾಗಿದೆ.
ಕೆಂಬಾವಿ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.