
ಬಳ್ಳಾರಿ, ಮೇ 13-ಮೊಳಕಾಲ್ಮೂರು ಹಾಗೂ ಬಾದಾಮಿ ಎರಡೂ ಕ್ಷೇತ್ರಗಳಲ್ಲಿ ನನ್ನ ಗೆಲುವು ಖಚಿತ. ರಾಜ್ಯದಲ್ಲಿ ಬಿಜೆಪಿ ಆಡಳಿತ ನಿಶ್ಚಿತ ಎಂದು ಸಂಸದ ಶ್ರೀರಾಮುಲು ತಿಳಿಸಿದ್ದಾರೆ.
ಇಂದು ಬೆಳಗ್ಗೆ ಇಲ್ಲಿನ ತಮ್ಮ ನಿವಾಸದಲ್ಲಿ ಪತ್ರಿಕೆಗಳನ್ನು ಓದುತ್ತಾ ರಿಲ್ಯಾಕ್ಸ್ ಮೂಡ್ನಲ್ಲಿದ್ದ ಶ್ರೀರಾಮುಲು ಅವರನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಹೆಚ್ಚು ಮತದಾನವಾಗಿದೆ. ಎಲ್ಲಾ ಸಮುದಾಯದವರು ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಸಿದ್ದರಾಮಯ್ಯ ಅವರ ದುರಾಡಳಿತ ಕೊನೆಗಾಣಿಸಿದ್ದಾರೆ ಎಂದು ಹೇಳಿದರು. ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದು ಶತಸಿದ್ಧ. ಬಾದಾಮಿ ಹಾಗೂ ಮೊಳಕಾಲ್ಮೂರಿನಲ್ಲಿ ನನ್ನ ವಿರುದ್ಧ ಹಲವರು ಪಿತೂರಿ ನಡೆಸಿದರು. ಆದರೆ ಅವರ ಆಸೆ ಈಡೇರುವುದಿಲ್ಲ ಎಂದು ಹೇಳಿದರು. ಸಿದ್ದರಾಮಯ್ಯ ಅವರಿಗೆ ಸೋಲಿನ ಭೀತಿ ಕಾಡುತ್ತಿರುವುದರಿಂದ ಅವರು ಈಗ ದಲಿತ ಮುಖ್ಯಮಂತ್ರಿ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ರಾಜಕೀಯ ಅತಂತ್ರ ಬಾಧಿಸುತ್ತಿದೆ ಎಂದರು.