ದೇಶದಲ್ಲಿರುವ ಕಾರಾಗೃಹಗಳು ಕೈದಿಗಳಿಂದ ಕಿಕ್ಕಿರಿದು ತುಂಬಿರುವ ಬಗ್ಗೆ ಸುಪ್ರೀಂಕೋರ್ಟ್ ಕಳವಳ:

ನವದೆಹಲಿ, ಮೇ 13-ದೇಶದಲ್ಲಿರುವ ಕಾರಾಗೃಹಗಳು ಕೈದಿಗಳಿಂದ ಕಿಕ್ಕಿರಿದು ತುಂಬಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳನ್ನು ಪರಿಗಣಿಸುವಂತೆ ಎಲ್ಲ ಹೈಕೋರ್ಟ್‍ಗಳಿಗೆ ಸೂಚನೆ ನೀಡಿದೆ.
ಭಾರತದಲ್ಲಿರುವ ಎಲ್ಲಾ ಜೈಲುಗಳಲ್ಲಿ ಕೈದಿಗಳು ಅತ್ಯಧಿಕ ಸಂಖ್ಯೆಯಲ್ಲಿದ್ಧಾರೆ. ಕೆಲವು ಪ್ರಕರಣಗಳಲ್ಲಿ ಸಾಮಥ್ರ್ಯಕ್ಕಿಂತ ಶೇ.150ರಷ್ಟು ಹೆಚ್ಚಾಗಿದೆ ಎಂದು ನ್ಯಾಯಮೂರ್ತಿಗಳಾದ ಮದನ್ ಬಿ. ಲೋಕುರ್ ಮತ್ತು ದೀಪಕ್ ಗುಪ್ತಾ ಅವರನ್ನು ಒಳಗೊಂಡ ಪೀಠವು ಅಸಮಾಧಾನ ವ್ಯಕ್ತಪಡಿಸಿದೆ. ಈ ಗಂಭೀರ ಪ್ರಕರಣವನ್ನು ದೇಶದ ಎಲ್ಲ ಹೈಕೋರ್ಟ್‍ಗಳ ಮುಖ್ಯ ನ್ಯಾಯಮೂರ್ತಿಗಳು ಪರಿಗಣಿಸಬೇಕು. ಸು-ಮೋಟೊ(ಸ್ವಯಂ ಪ್ರೇರಿತ) ರಿಟ್ ಅರ್ಜಿ ಮೂಲಕ ಈ ಪ್ರಕರಣಗಳನ್ನು ಕೈಗೆತ್ತಿಕೊಳ್ಳಬೇಕು. ಹಾಗೂ ಅಮಿಕಸ್ ಕ್ಯೂರೀ (ನ್ಯಾಯಾಲಯ ಮಿತ್ರ) ಒಬ್ಬರನ್ನು ನ್ಯಾಯಾಲಯಕ್ಕೆ ನೆರವಾಗಲು ನಿಯೋಜಿಸಬೇಕು ಎಂದು ಸಲಹೆ ನೀಡಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ