ಕೋಲ್ಕತಾ, ಮೇ 13-ಪಶ್ಚಿಮ ಬಂಗಾಳದಲ್ಲಿ ನಾಳೆ ಮಹತ್ವದ ಪಂಚಾಯಿತಿ ಚುನಾವಣೆಗೆ ವೇದಿಕೆ ಸಕಲ ರೀತಿಯಲ್ಲಿ ಸಜ್ಜಾಗಿದೆ. 621 ಜಿಲ್ಲಾ ಪರಿಷತ್‍ಗಳು, 6,157 ಪಂಚಾಯಿತಿ ಸಮಿತಿಗಳು ಹಾಗೂ 31,827 ಗ್ರಾಮ ಪಂಚಾಯಿತಿಗಳಿಗೆ ಬೆಳಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದ್ದು, ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ.
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮುನ್ನ ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ಕೊನೆಯ ಪ್ರಮುಖ ಚುನಾವಣಾ ಇದಾಗಿದೆ. ಇದನ್ನು 2019ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಅಭ್ಯಾಸ ಪಂದ್ಯ ಎಂದೇ ರಾಜಕೀಯ ಪಕ್ಷಗಳು ಬಣ್ಣಿಸಿವೆ.
ಒಂದೆ ಹಂತದಲ್ಲಿ ನಡೆಯುವ ಈ ಚುನಾವಣೆ ಆಡಳಿತರೂಢ ತೃಣಮೂಲ ಕಾಂಗ್ರೆಸ್, ಪ್ರತಿ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಮತ್ತು ಎಡ ರಂಗಗಳಿಗೂ ಪ್ರತಿಷ್ಠೆಯ ಪ್ರಶ್ನೆಯಾಗಿದೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಪಿ ಈಗಾಗಲೇ 20,000ಕ್ಕೂ ಹೆಚ್ಚು ಪಂಚಾಯಿತಿ ಸ್ಥಾನಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಿದೆ. ಇನ್ನುಳಿದ ಕ್ಷೇತ್ರಗಳಲ್ಲಿ ತೀವ್ರ ಪೈಪೆÇೀಟಿ ಎದುರಾಗಿದೆ. ಮೇ 17ರಂದು ಫಲಿಶಾಂಶ ಪ್ರಕಟಗೊಳ್ಳಲಿದೆ.
ವ್ಯಾಪಕ ಹಿಂಸಾಚಾರ : ನಡೆಯುವ ಪಂಚಾಯತಿ ಚುನಾವಣೆಗಳಿಗೆ ಮುನ್ನವೇ ಹಲವೆಡೆ ಹಿಂಸಾಚಾರ ಭುಗಿಲೆದ್ದಿದೆ. ಸೌತ್ 24 ಪರಗಣ ಜಿಲ್ಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯ ಬೆಂಬಲಿಗನೊಬ್ಬನ ಕೊಲೆ ಪ್ರಕರಣದ ಸಂಬಂಧ ತೃಣಮೂಲ ಕಾಂಗ್ರೆಸ್(ಟಿಎಂಸಿ) ಪ್ರಬಲ ನಾಯಕ ಅರಬುಲ್ ಇಸ್ಲಾಂರನ್ನು ಪೆÇಲೀಸರು ಬಂಧಿಸಿದ್ದಾರೆ.
ಕಾಶೀಪುರ್‍ನಿಂದ ಮಚ್ಚಿಭಾಂಗ ಪ್ರದೇಶಕ್ಕೆ ಸ್ವತಂತ್ರ ಅಭ್ಯರ್ಥಿ ಪರವಾಗಿ ನಿನ್ನೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಹಫಿಜುಲ್ ಇಸ್ಲಾಂ ಮೊಲ್ಲಾ(25) ಎಂಬ ಕಾರ್ಯಕರ್ತನ ಮೇಲೆ ಗುಂಡು ಹಾರಿಸಿ ಕೊಲ್ಲಲಾಗಿತ್ತು. ಈ ಹತ್ಯೆ ಪ್ರಕರಣದಲ್ಲಿ ಅರಬುಲ್ ಇಸ್ಲಾಂ ಹೆಸರ ಪ್ರಮುಖವಾಗಿ ಕೇಳಿಬಂದಿತ್ತು. ಗೃಹ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆದೇಶದ ಮೇರೆಗೆ ಆರೋಪಿ ಇಸ್ಲಾಂನನ್ನು ಬಂಧಿಸಲಾಗಿದೆ.