ಬೆಂಗಳೂರು,ಮೇ13- ದಲಿತ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಮಾತನಾಡುವ ಸೂಕ್ತ ಸಮಯವಲ್ಲ ಇದು ಎಂದು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಇಂದಿಲ್ಲಿ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಲಿತರಿಗೆ ಸಿಎಂ ಸ್ಥಾನ ಬಿಟ್ಟುಕೊಡುವುದಾಗಿ ಹೇಳಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿ ಯಾರಾಗಬೇಕೆಂದು ಶಾಸಕಾಂಗ ಸಭೆಯಲ್ಲಿ ತೀರ್ಮಾನವಾಗಲಿದೆ ಎಂದರು.
ಕಾಂಗ್ರೆಸ್ ಪಕ್ಷ ಬಹುಮತ ಪಡೆಯಲಿದ್ದು , ಮುಖ್ಯಮಂತ್ರಿ ಆಯ್ಕೆಯನ್ನು ಶಾಸಕಾಂಗ ಪಕ್ಷ ಹಾಗೂ ಹೈಕಮಾಂಡ್ ನಿರ್ಧರಿಸಲಿದೆ ಹಾಗೂ ಜನಾಭಿಪ್ರಾಯವನ್ನು ಸಂಗ್ರಹಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾತಿನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟಪಡಿಸಿದರು.