ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗದೆ ಏನನ್ನೂ ಹೇಳಲು ಸಾಧ್ಯವಿಲ್ಲ – ಎಚ್.ಡಿ.ದೇವೇಗೌಡ

ಹಾಸನ,ಮೇ14-ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗದೆ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಫಲಿತಾಂಶ ಹೊರಬರಲಿ, ಯಾರೂ ಸರ್ಕಾರ ರಚಿಸುತ್ತಾರೋ ಎಂಬುದನ್ನು ಕಾದು ನೋಡೋಣ ಎಂದು ಹೇಳುವ ಮೂಲಕ ಗೌಡರು ಯಾವುದೇ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ.
ಫಲಿತಾಂಶ ಹೊರಬರುವ ಮುನ್ನ ಏನನ್ನೂ ಹೇಳಲು ಸಾಧ್ಯವಾಗುವುದಿಲ್ಲ. ಕಾಂಗ್ರೆಸ್‍ನಲ್ಲಿ ದಲಿತ ಮುಖ್ಯಮಂತ್ರಿ ವಿಚಾರ ಹಾಗೂ ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಸಿಎಂ ಅಭ್ಯರ್ಥಿ ಎಂಬುದರ ಬಗ್ಗೆ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದರು.
ಜೆಡಿಎಸ್ ಪಕ್ಷದ ಸಾಮಥ್ರ್ಯ ಏನೆಂಬುದು ನಾಳಿನ ಫಲಿತಾಂಶದಲ್ಲಿ ಗೊತ್ತಾಗಲಿದೆ. ಫಲಿತಾಂಶ ಬರಲಿ ಅಲ್ಲಿಯವರೆಗೆ ಕಾದು ನೋಡೋಣ ಎಂದು ಗೌಡರು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ