ಬೆಂಗಳೂರು, ಮೇ 14- ರಾಜ್ಯ ವಿಧಾನಸಭೆಯ 222 ಕ್ಷೇತ್ರಗಳಿಗೆ ನಡೆದ ಮತದಾನದ ಮತ ಎಣಿಕೆ ನಾಳೆ ನಡೆಯಲಿದ್ದು, ತ್ವರಿತವಾಗಿ ಫಲಿತಾಂಶ ನೀಡಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯಚುನಾವಣಾಧಿಕಾರಿ ಸಂಜೀವ್ಕುಮಾರ್ ತಿಳಿಸಿದರು.
ಮತ ಎಣಿಕೆಗೆ ಅಗತ್ಯವಿರುವ ಎಲ್ಲಾ ರೀತಿಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ವಿದ್ಯುನ್ಮಾನ ಮತಯಂತ್ರ ಬಳಕೆ ಮಾಡುವುದರಿಂದ ಫಲಿತಾಂಶವು ತ್ವರಿತವಾಗಿ ಲಭ್ಯವಾಗುವ ಸಾಧ್ಯತೆ ಇದೆ ಎಂದರು.
ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಆರಂಭವಾಗಲಿದೆ. ಮತ ಎಣಿಕೆ ಕೇಂದ್ರದಲ್ಲಿ ಅಗತ್ಯ ಪೆÇಲೀಸ್ ಬಿಗಿ ಭದ್ರತೆ ಒದಗಿಸಲಾಗಿದ್ದು, ಮಾಧ್ಯಮ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಹೇಳಿದರು.
ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ 14 ಟೇಬಲ್ಗಳನ್ನು ಮತ ಎಣಿಕೆಗೆ ಬಳಸಲಾಗುತ್ತದೆ. ಬೆಂಗಳೂರಿನಲ್ಲಿ ಐದು ಮತ ಎಣಿಕೆ ಕೇಂದ್ರಗಳನ್ನು ತೆರೆಯಲಾಗಿದೆ. ಉಳಿದಂತೆ ಆಯಾ ಜಿಲ್ಲೆಗಳ ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆ ಕೇಂದ್ರಗಳನ್ನು ತೆರೆಯಲಾಗಿದೆ.
ಸಾರ್ವಜನಿಕರ ಅನುಕೂಲಕ್ಕಾಗಿ ಬೆಳಗ್ಗೆಯಿಂದಲೇ ಪಕ್ಷವಾರು ಮುನ್ನಡೆ ಮಾಹಿತಿಯನ್ನು ಕೂಡ ಆಯೋಗದ ವೆಬ್ಸೈಟ್ನಲ್ಲಿ ಒದಗಿಸಲಾಗುವುದು ಎಂದು ಹೇಳಿದರು.