
ಬೆಂಗಳೂರು: ಮೇ,15: ತವರು ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾರೀ ಮುಖಭಂಗ ಅನುಭವಿಸಿದ್ದಾರೆ. ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಾದಾಮಿ ಕ್ಷೇತ್ರದ ಜನತೆ ಕೈ ಹಿಡಿದಿದ್ದಾರೆ.
ಚಾಮುಂಡೇಶ್ವರಿಯಲ್ಲಿ ಜೆಡಿಎಸ್‍ನ ಜಿಟಿ ದೇವೇಗೌಡ ಅವರ ವಿರುದ್ಧ ಸುಮಾರು 24 ಸಾವಿರ ಮತಗಳ ಅಂತರದಿಂದ ಸೋಲು ಅನುಭವಿಸಿದ್ದು, ಬಾದಾಮಿಯಲ್ಲಿ ಬಿಜೆಪಿ ಪ್ರತಿಸ್ಪರ್ಧಿ ಶ್ರೀ ರಾಮುಲು ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆಲುವು ಸಾಧಿಸಿದ್ದಾರೆ.
ಇನ್ನು ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸೋಲನುಭವಿಸಿದ ಶ್ರೀ ರಾಮುಲು ಮೊಳಕಾಲ್ಮೂರಿನಲ್ಲಿ ಗೆಲುವು ಸಾಧಿಸಿದ್ದಾರೆ.