ಖಾತೆ ತೆರೆದ ಪಕ್ಷೇತರ ಅಭ್ಯರ್ಥಿ

ಬೆಳಗಾವಿ: ಮೇ,15: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ರಾಜಕೀಯ ಪಕ್ಷಗಳ ಅಬ್ಬರದ ನಡುವೆಯೇ ಪಕ್ಷೇತರ ಅಭ್ಯರ್ಥಿಯೊಬ್ಬರು ಮುನ್ನಡೆ ಸಾಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಆನಂದ್ ಚೋಪ್ರಾ ಅವರು ಮುನ್ನಡೆ ಸಾಧಿಸಿದ್ದು, ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳು ಹಿನ್ನಡೆ ಸಾಧಿಸಿದ್ದಾರೆ.
ಇತ್ತ ಕೊಳ್ಳೆಗಾಲದಲ್ಲಿ ಬಿಎಸ್ ಪಿ ಅಭ್ಯರ್ಥಿ ಮಹೇಶ್ ಅವರೂ ಕೂಡ ಮುನ್ನಡೆ ಸಾಧಿಸಿದ್ದಾರೆ. ಕೊಳ್ಳೆಗಾಲದಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹಿನ್ನಡೆ ಸಾಧಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ