
ರಾಮನಗರದಲ್ಲಿ ಹೆಚ್ ಡಿ ಕುಮಾರಸ್ವಾಮಿಗೆ ಭರ್ಜರಿ ಗೆಲುವು ದಾಖಲಿಸಿದ್ದು, 19 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಭರ್ಜರಿ ಜಯಗಳಿಸಿದ್ದಾರೆ. ಇನ್ನು ಶಿಕಾರಿಪುರದಿಂದಮ ಬಿಜೆಪಿ ಅಭ್ಯರ್ಥಿ ಯಡಿಯೂರಪ್ಪ ಅವರು ಭರ್ಜರಿ ಗೆಲುವು ದಾಖಲಿಸಿದ್ದಾರೆ.
ರಾಮನಗರ ಹಾಗೂ ಚನ್ನಪಟ್ಟಣದಲ್ಲಿ ಗೆಲುವು ಸಾಧಿಸುವ ಮೂಲಕ ಹೆಚ್ ಡಿ ಕುಮಾರಸ್ವಾಮಿ ಮಹಾನ್ ನಾಯಕರಾಗಿ ಹೊರಹೊಮ್ಮಿದ್ದಾರೆ.
ಚನ್ನಪಟ್ಟಣದಲ್ಲೂ ಭರ್ಜರಿ ಗೆಲುವು ಸಾಧಿಸಿರುವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ಅಭ್ಯರ್ಥಿ ಸಿಪಿ ಯೋಗೀಶ್ವರ್ ಸೋಲನುಭವಿಸಿದ್ದಾರೆ.
ಮಂಗಳೂರು 8ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಚ್ಚಳ:
ಮಂಗಳೂರಿನ ಯು ಟಿ ಖಾದರ್ ಹೊರತುಪಡಿಸಿದರೆ ಉಳಿದೆಲ್ಲಾ 7 ಕ್ಷೇತ್ರಗಳಲಿ ಬಿಜೆಪಿ ಗೆಲುವು ಸಾಧಿಸಿದೆ.