
ಬೆಂಗಳೂರು:ಮೇ-15: ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಅವರು ಶಿಕಾರಿಪುರ ಕ್ಷೇತ್ರದಲ್ಲಿ 25,000ಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ ಅವರು ರಾಮನಗರ ಕ್ಷೇತ್ರದಲ್ಲಿ 20,000ಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ತವರು ಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಎದುರಾಳಿ ಜೆಡಿಎಸ್‌ನ ಜಿ.ಟಿ ದೇವೇಗೌಡ ಅವರ ಮುಂದೆ ಸೋಲು ಅನುಭವಿಸಿದ್ದಾರೆ. ಆದರೆ ಬಾದಾಮಿಯಲ್ಲಿ ಬಿಜೆಪಿಯ ಬಿ. ಶ್ರೀರಾಮುಲು ವಿರುದ್ಧ ಪ್ರಯಾಸದ ಗೆಲುವು ಸಾಧಿಸಿದ್ದಾರೆ.
ರಾಜ್ಯದ ಮೊದಲ ಫಲಿತಾಂಶ ಮೂಡುಬಿದಿರೆಯಿಂದ ಪ್ರಕಟವಾಗಿದ್ದು, ಬಿಜೆಪಿಯ ಉಮಾನಾಥ ಕೋಟ್ಯಾನ್ ಅವರು ಎದುರಾಳಿ ಕಾಂಗ್ರೆಸ್‌ನ ಅಭಯಚಂದ್ರ ಜೈನ್ ವಿರುದ್ಧ 22,000ಕ್ಕೂ ಹೆಚ್ಚು ಮತಗಳಿಂದ ಜಯ ಸಾಧಿಸಿದ್ದಾರೆ.