ಬೆಂಗಳೂರು:ಮೇ-15: ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಅತಂತ್ರ ವಿಧಾನಸಭೆ ನಿರ್ಮಾಣವಾಗುತ್ತಿದ್ದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ್ದಾರೆ.
ಇಂದು ರಾಜ್ಯಪಾಲ ವಿ.ಆರ್.ವಾಲಾ ಅವರನ್ನು ಭೇಟಿಯಾದ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ರಾಜೀನಾಮೆ ಅಂಗೀಕರಿಸಿರುವ ರಾಜ್ಯಪಾಲ ವಜುಭಾಯ್ ವಾಲ ಉಸ್ತುವಾರಿ ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಿದ್ದಾರೆ.
ಈ ವೇಳೆ ರಾಜಭವನದಲ್ಲಿ ಮಾತನಾಡಿರುವ ಸಿದ್ದರಾಮಯ್ಯ ಸರ್ಕಾರ ರಚಿಸಲು ಜೆಡಿಎಸ್ ಗೆ ಬೆಂಬಲ ನೀಡುತ್ತೇವೆ, ಈ ಬಗ್ಗೆ ರಾಜ್ಯಪಾಲರೊಂದಿಗೆ ಚರ್ಚಿಸಿದ್ದೇನೆ, ರಾಜೀನಾಮೆ ಅಂಗೀಕರಿಸಿರುವ ರಾಜ್ಯಪಾಲರು ಉಸ್ತುವಾರಿ ಸಿಎಂ ಆಗಿ ಮುಂದುವರೆಯಲು ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.