ವಿಧಾನಸಭಾ ಚುನಾವಣೆ: ಗೆಲುವಿಗಾಗಿ ರಾಜಕೀಯ ಮುಖಂಡರಿಂದ ದೇವಾಲಯಗಳಿಗೆ ಭೇಟಿ; ವಿಶೇಷ ಪೂಜೆ

ಬೆಂಗಳೂರು:ಮೇ-15: ವಿಧಾನಸಭೆ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ರಾಜಕೀಯ ಮುಖಂಡರು ತಮ್ಮ ಗೆಲುವಿಗಾಗಿ ದೇವರ ಮೊರೆ ಹೋಗುತ್ತಿದ್ದಾರೆ.

ಅತ್ತ ಹೈವೋಲ್ಟೇಜ್ ಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿರುವ ಜಿಟಿ ದೇವೇಗೌಡ ಅವರು, ಕುಟುಂಬ ಸಮೇತರಾಗಿ ಚಾಮುಂಡಿ ಬೆಟ್ಟಕ್ಕೆ ತೆರಳು ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ಈ ವೇಳೆ ಕ್ಷೇತ್ರದಲ್ಲಿ ತಮ್ಮದೇ ಗೆಲುವು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿಂಗಾಪುರಕ್ಕೆ ತೆರಳಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು, ಕರ್ನಾಟಕಕ್ಕೆ ವಾಪಸ್ ಆಗಿದ್ದಾರೆ. ನಾಗಮಂಗಲ ತಾಲ್ಲೂಕಿನಲ್ಲಿರುವ ಆದಿಚುಂಚನಗಿರಿ ಮಠದ ಕಾಲಭೈರವೇಶ್ವರ ದೇಗುಲಕ್ಕೆ ದಂಪತಿ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಂದು ಅಮವಾಸ್ಯೆ ಆಗಿರುವುದರಿಂದ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇಂದು ಬೆಳಗ್ಗೆ ನಾಗಮಂಗಲದಲ್ಲಿರುವ ಶ್ರೀ ಆದಿ ಚುಂಚನಗಿರಿ ದೇವಾಲಯಕ್ಕೆ ಪತ್ನಿ ಅನಿತಾ ಕುಮಾರ ಸ್ವಾಮಿ ಅವರೊಂದಿಗೆ ತೆರಳಿ ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ಈ ವೇಳೆ ಚಿತ್ರನಟಿ ಅಮೂಲ್ಯ ಮತ್ತು ಅವರ ಪತಿ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಇನ್ನು ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರು ತಮ್ಮ ನಿವಾಸದಲ್ಲಿ ವಿಶೇಷ ಪೂಜೆ ನೆರವೇರಿಸದರು. ಈ ವೇಳೆ ಗೋಪೂಜೆ ನೆರವೇರಿಸಿದ ಶ್ರೀರಾಮುಲು ಗೆಲುವಿಗಾಗಿ ಪ್ರಾರ್ಥನೆ ಮಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ