ಬೆಂಗಳೂರು:ಮೇ-15: ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಅತಂತ್ರ
ವಿಧಾನಸಭೆ ನಿರ್ಮಾಣವಾಗುತ್ತಿದ್ದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
ಸಲ್ಲಿಸಿದ್ದಾರೆ.
ಇಂದು ರಾಜ್ಯಪಾಲ ವಿ.ಆರ್.ವಾಲಾ ಅವರನ್ನು ಭೇಟಿಯಾದ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ
ರಾಜೀನಾಮೆ ಸಲ್ಲಿಸಿದರು. ರಾಜೀನಾಮೆ ಅಂಗೀಕರಿಸಿರುವ ರಾಜ್ಯಪಾಲ ವಜುಭಾಯ್ ವಾಲ ಉಸ್ತುವಾರಿ
ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಿದ್ದಾರೆ.
ಈ ವೇಳೆ ರಾಜಭವನದಲ್ಲಿ ಮಾತನಾಡಿರುವ ಸಿದ್ದರಾಮಯ್ಯ ಸರ್ಕಾರ ರಚಿಸಲು ಜೆಡಿಎಸ್ ಗೆ ಬೆಂಬಲ
ನೀಡುತ್ತೇವೆ, ಈ ಬಗ್ಗೆ ರಾಜ್ಯಪಾಲರೊಂದಿಗೆ ಚರ್ಚಿಸಿದ್ದೇನೆ, ರಾಜೀನಾಮೆ ಅಂಗೀಕರಿಸಿರುವ
ರಾಜ್ಯಪಾಲರು ಉಸ್ತುವಾರಿ ಸಿಎಂ ಆಗಿ ಮುಂದುವರೆಯಲು ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.
ಬಿಜೆಪಿ ಸಿಎಂ ಅಭ್ಯರ್ಥಿ ಬಿಎಸ್ ಯಡಿಯೂರಪ್ಪ ನವರಿಗೆ ಶಿಕಾರಿಪುರ ಕ್ಷೇತ್ರದಲ್ಲಿ
25,000ಕ್ಕೂ ಅಧಿಕ ಮತಗಳಿಂದ ಗೆಲು: ಸಿಎಂ ಗೆ ಚಾಮುಂಡೇಶ್ವರಿಯಲ್ಲಿ ತೀವ್ರ ಮುಖಬಂಗ
ಬೆಂಗಳೂರು:ಮೇ-15: ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಅವರು
ಶಿಕಾರಿಪುರ ಕ್ಷೇತ್ರದಲ್ಲಿ 25,000ಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ ಅವರು ರಾಮನಗರ ಕ್ಷೇತ್ರದಲ್ಲಿ
20,000ಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ತವರು ಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಎದುರಾಳಿ
ಜೆಡಿಎಸ್‌ನ ಜಿ.ಟಿ ದೇವೇಗೌಡ ಅವರ ಮುಂದೆ ಸೋಲು ಅನುಭವಿಸಿದ್ದಾರೆ. ಆದರೆ ಬಾದಾಮಿಯಲ್ಲಿ
ಬಿಜೆಪಿಯ ಬಿ. ಶ್ರೀರಾಮುಲು ವಿರುದ್ಧ ಪ್ರಯಾಸದ ಗೆಲುವು ಸಾಧಿಸಿದ್ದಾರೆ.
ರಾಜ್ಯದ ಮೊದಲ ಫಲಿತಾಂಶ ಮೂಡುಬಿದಿರೆಯಿಂದ ಪ್ರಕಟವಾಗಿದ್ದು, ಬಿಜೆಪಿಯ ಉಮಾನಾಥ ಕೋಟ್ಯಾನ್
ಅವರು ಎದುರಾಳಿ ಕಾಂಗ್ರೆಸ್‌ನ ಅಭಯಚಂದ್ರ ಜೈನ್ ವಿರುದ್ಧ 22,000ಕ್ಕೂ ಹೆಚ್ಚು ಮತಗಳಿಂದ
ಜಯ ಸಾಧಿಸಿದ್ದಾರೆ.
…………