ದೇಶವನ್ನು ಕಾಂಗ್ರೆಸ್ ಮುಕ್ತಗೊಳಿಸಬೇಕೆಂಬ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಶಪಥ ಸಾಕಾರ:

ನವದೆಹಲಿ, ಮೇ 15- ದೇಶವನ್ನು ಕಾಂಗ್ರೆಸ್ ಮುಕ್ತಗೊಳಿಸಬೇಕೆಂಬ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಶಪಥ ಹಂತ ಹಂತವಾಗಿ ಸಾಕಾರಗೊಳ್ಳುತ್ತಿದೆ.
ದೇಶದಲ್ಲಿ ಕಾಂಗ್ರೆಸ್ ಆಡಳಿತವಿದ್ದ ಅತಿ ದೊಡ್ಡ ರಾಜ್ಯವೆಂಬ ಹೆಗ್ಗಳಿಕೆ ಪಡೆದಿದ್ದ ಕರ್ನಾಟಕದಲ್ಲಿ ಬಿಜೆಪಿ ಪಾರುಪಥ್ಯ ಆರಂಭವಾಗಿದೆ.
ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರ ಮಹದಾಸೆಗೆ ರಾಜ್ಯ ವಿಧಾನಸಭಾ ಚುನಾವಣಾ Àಲಿತಾಂಶ ತಣ್ಣೀರೆರಚಿದೆ.
ಮತ್ತೊಂದೆಡೆ ಪ್ರಧಾನಿ ಮೋದಿ ಅವರ ಜನಪ್ರಿಯತೆಯ ಅಲೆಯಲ್ಲಿ ಗೆಲುವಿನ ಸವಾರಿ ಮಾಡುತ್ತಿರುವ ಬಿಜೆಪಿ ಅತಿ ದೊಡ್ಡ ಭದ್ರಕೋಟೆಯನ್ನು ವಶಪಡಿಸಿಕೊಂಡ ಖುಷಿಯಲ್ಲಿದೆ.
ಈಗ ದೇಶದಲ್ಲಿರುವ 29 ರಾಜ್ಯಗಳ ಪೈಕಿ 21ರಲ್ಲಿ ಬಿಜೆಪಿ ಸರ್ಕಾರವಿದ್ದರೆ, ಕಾಂಗ್ರೆಸ್ ಆಡಳಿತವಿರುವುದು ರಾಜ್ಯ (ಪಂಜಾಬ್, ಮಿಜೋರಾಂ ಮತ್ತು ಪುದುಚೇರಿ)ಗಳಲ್ಲಿ.
130ಕ್ಕೂ ಹೆಚ್ಚು ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ವಿಶ್ವದ ಅತ್ಯಂತ ಹಳೆಯ ರಾಷ್ಟ್ರೀಯ ಪಕ್ಷ ಎನಿಸಿದ ಕಾಂಗ್ರೆಸ್ ಈಗ ಭಾರತದಲ್ಲಿ ಹಂತ ಹಂತವಾಗಿ ತನ್ನ ವರ್ಚಸ್ಸನ್ನು ಕಳೆದುಕೊಳ್ಳುತ್ತಿರುವುದು ಪ್ರಸ್ತುತ ಸನ್ನಿವೇಶದ ರಾಜಕೀಯ ದುರಂತ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ