ಮೈಸೂರು, ಮೇ 15- ಜಿಲ್ಲೆಯಲ್ಲಿ ಒಟ್ಟು 11 ವಿಧಾನಸಭಾ ಕ್ಷೇತ್ರಗಳಿದ್ದು , ಐದು ಕ್ಷೇತ್ರಗಳಲ್ಲಿ ಜೆಡಿಎಸ್ ಜಯಭೇರಿ ಬಾರಿಸಿದ್ದರೆ , ಉಳಿದ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್, ಬಿಜೆಪಿ ತಲಾ ಮೂರು ಕ್ಷೇತ್ರಗಳನ್ನು ಹಂಚಿಕೊಂಡಿದೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್‍ನ ಜಿ.ಟಿ.ದೇವೇಗೌಡ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ನರಸಿಂಹರಾಜ ಕ್ಷೇತ್ರದಲ್ಲಿ ಸಚಿವ ತನ್ವೀರ್ ಸೇಠ್, ಚಾಮರಾಜ ಕ್ಷೇತ್ರದಲ್ಲಿ ಬಿಜೆಪಿಯ ಎಲ್.ನಾಗೇಂದ್ರ , ಕೃಷ್ಣರಾಜದಲ್ಲಿ ಮಾಜಿ ಸಚಿವ ಬಿಜೆಪಿಯ ಎಸ್.ಎ.ರಾಮದಾಸ್ ಗೆಲುವಿನ ನಗೆ ಬೀರಿದ್ದಾರೆ.
ವರುಣಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಗೆದ್ದಿದ್ದಾರೆ. ಕೆ.ಆರ್.ನಗರ ಕ್ಷೇತ್ರದಲ್ಲಿ ಜೆಡಿಎಸ್‍ನ ಸಾ.ರಾ.ಮಹೇಶ್ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ.
ಹುಣಸೂರಿನಲ್ಲಿ ಜೆಡಿಎಸ್‍ನ ಎಚ್.ವಿಶ್ವನಾಥ್, ಎಚ್.ಡಿ.ಕೋಟೆಯಲ್ಲಿ ದಿವಂಗತ ಚಿಕ್ಕಮಾದು ಅವರ ಪುತ್ರ ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಚಿಕ್ಕಮಾದು, ಟಿ.ನರಸೀಪುರದಲ್ಲಿ ಜೆಡಿಎಸ್‍ನ ಅಶ್ವಿನ್‍ಕುಮಾರ್, ಪಿರಿಯಾಪಟ್ಟಣದಲ್ಲಿ ಜೆಡಿಎಸ್‍ನ ಕೆ.ಮಹದೇವ್ ಹಾಗೂ ನಂಜನಗೂಡು ಕ್ಷೇತ್ರದಲ್ಲಿ ಬಿಜೆಪಿಯ ಹರ್ಷವರ್ಧನ್ ಜಯಭೇರಿ ಬಾರಿಸಿದ್ದಾರೆ.