
ಮಂಡ್ಯ ಮೇ 15- ಸಕ್ಕರೆ ನಾಡು ಮಂಡ್ಯದಲ್ಲಿ ಜೆಡಿಎಸ್ಗೆ ಸಿಹಿ ಅನುಭವವಾಗಿದ್ದು, ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಆ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ನ ರವೀಂದ್ರ ಶ್ರೀಕಂಠಯ್ಯಘಿ, ಮೇಲುಕೋಟೆಯಲ್ಲಿ ಸಂಸದ ಸಿ.ಎಸ್.ಪುಟ್ಟರಾಜು, ಕೆಆರ್ ಪೇಟೆಯಲ್ಲಿ ಕೆ.ಸಿ.ನಾರಾಯಣಗೌಡ, ನಾಗಮಂಗಲ ಕ್ಷೇತ್ರದಲ್ಲಿ ಸುರೇಶ್ಗೌಡ, ಮಂಡ್ಯದಲ್ಲಿ ಎಂ.ಶ್ರೀನಿವಾಸ್, ಮಳವಳ್ಳಿಯಲ್ಲಿ ಡಾ.ಕೆ.ಅನ್ನದಾನಿ, ಮದ್ದೂರಿನಲ್ಲಿ ಡಿ.ಸಿ.ತಮ್ಮಣ್ಣ ಗೆಲುವು ಸಾಧಿಸಿದ್ದಾರೆ.
ಜೆಡಿಎಸ್ಗೆ ಕೈಕೊಟ್ಟು ಶ್ರೀರಂಗಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಮೇಶ್ ಬಂಡಿಸಿದ್ದನಗೌಡ ಅವರು ಹೀನಾಯ ಸೋಲು ಅನುಭವಿಸಿದ್ದಾರೆ.
ರೆಬಲ್ ಸ್ಟಾರ್ ಅಂಬರೀಶ್ ಅವರನ್ನು ಕಾಂಗ್ರೆಸ್ ಪಕ್ಷ ಕಡೆಗಣಿಸಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲೆಯ ಮತದಾರರು ಈ ಬಾರಿ ಜೆಡಿಎಸ್ಗೆ ಸಂಪೂರ್ಣ ಬೆಂಬಲ ಸೂಚಿಸುವ ಮೂಲಕ ಕೈ ಪಾಳಯಕ್ಕೆ ಚುರುಕು ಮುಟ್ಟಿಸಿದ್ದಾರೆ.