
ಉಡುಪಿ,ಮೇ 15
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ 5 ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಾರ್ಟಿ ಮುನ್ನಡೆಯಲ್ಲಿದೆ.
ಉಡುಪಿಯ ಬೈಂದೂರು, ಕುಂದಾಪುರ, ಉಡುಪಿ, ಕಾಪು ಮತ್ತು ಕಾರ್ಕಳ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುಂಚೂಣಿಯಲ್ಲಿದ್ದಾರೆ.
ಬೈಂದೂರು ಕ್ಷೇತ್ರದಲ್ಲಿ ಬಿಜೆಪಿಯಿಂದ ಬಿ.ಎಂ.ಸುಕುಮಾರ್ ಶೆಟ್ಟಿ, ಕುಂದಾಪುರದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ, ಉಡುಪಿಯಲ್ಲಿ ಕೆ.ರಘುಪತಿ ಭಟ್, ಕಾಪು ಕ್ಷೇತ್ರದಲ್ಲಿ ಲಾಲಾಜಿ ಆರ್ ಮೆಂಡನ್ ಮತ್ತು ಕಾರ್ಕಳ ಕ್ಷೇತ್ರದಲ್ಲಿ ವಿ.ಸುನಿಲ್ ಕುಮಾರ್ ಮುನ್ನಡೆಯಲ್ಲಿದ್ದಾರೆ.