ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನಾಗಿ ಹೆಚ್.ಡಿ.ಕುಮಾರಸ್ವಾಮಿ ಆಯ್ಕೆ

ಬೆಂಗಳೂರು:ಮೇ-16: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನಾಗಿ ಹೆಚ್.ಡಿ.ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ.

ಖಾಸಗಿ ಹೋಟೆಲ್‌‌ನಲ್ಲಿ ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸರ್ವಾನುಮತದಿಂದ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಲಾಯಿತು. ಶಾಸಕಾಂಗ ಪಕ್ಷದ ಸಭೆಯ ನಂತರ ಕಾಂಗ್ರೆಸ್ ಪಕ್ಷದ ಬೆಂಬಲದೊಂದಿಗೆ ಸರ್ಕಾರ ರಚಿಸುವ ಬಗ್ಗೆ ಹಕ್ಕು ಮಂಡನೆ ಮಾಡಲು ನಿರ್ಧರಿಸಲಾಯಿತು.

ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌‌ನಿಂದ ಸ್ಪರ್ಧಿಸಿದ ಚುನಾಯಿತ ಸದಸ್ಯರು, ರಾಜ್ಯಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯರು, ಶಾಸಕಾಂಗ ಪಕ್ಷದ ಸಭೆಯಲ್ಲಿ ಹಾಜರಿದ್ದರು..

ರಾಜ್ಯದಲ್ಲಿ ಯಾವ ಪಕ್ಷಕ್ಕೆ ಬಹುಮತ ದೊರೆಯದಿರುವ ಹಿನ್ನೆಲೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ರಚನೆ ಮಾಡುವ ಪ್ರಯತ್ನಗಳು ನಡೆಯುತ್ತಿರುವುದರಿಂದ ಚುನಾಯಿತರಾಗಿರುವ ಎಲ್ಲ ಅಭ್ಯರ್ಥಿಗಳು ಒಗ್ಗಟ್ಟಿನಿಂದ ಇರಬೇಕು. ಆಪರೇಷನ್ ಕಮಲ ಮಾಡುವ ಸೂಚನೆಗಳಿದ್ದು, ಪ್ರತಿಯೊಬ್ಬರು ಜಾಗೃತರಾಗಿರಬೇಕು. ಯಾವುದೇ ಕಾರಣಕ್ಕೂ ಬಿಜೆಪಿ ಒಡ್ಡುವ ಆಮಿಷಗಳಿಗೆ ಬಲಿಯಾಗಬಾರದು ಎಂಬ ನಿರ್ದೇಶನವನ್ನು ಜೆಡಿಎಸ್ ಪಕ್ಷದ ವರಿಷ್ಠರು ನೀಡಿದ್ದಾರೆ.

Karnataka assembly election, H D Kumaraswamy,JDS Legislative Party Leader

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ