ಪಶ್ಚಿಮ ಬಂಗಾಳದ ಪಂಚಾಯಿತಿ ಚುನಾವಣೆ ಹಿಂಸಾಚಾರ: ಮೋದಿ ಕಳವಳ

ನವದೆಹಲಿ, ಮೇ 16-ಪಶ್ಚಿಮ ಬಂಗಾಳದ ಪಂಚಾಯಿತಿ ಚುನಾವಣೆಗಳ ವೇಳೆ ನಡೆದ ವ್ಯಾಪಕ ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಿಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಚುನಾವಣಾ ಫಲಿತಾಂಶಕ್ಕಿಂತ ಪ್ರಜಾಪ್ರಭುತ್ವ ಮುಖ್ಯ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದ 20 ಜಿಲ್ಲೆಗಳಲ್ಲಿ ಪಂಚಾಯಿತಿ ಚುನಾವಣೆ ವೇಳೆ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಹಲವೆಡೆ ಘರ್ಷಣೆಗಳು ಭುಗಿಲೆದ್ದು 12 ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದರು, ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟವಾಗಿತ್ತು.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡ ಮೋದಿ, ಹಿಂಸಾಚಾರದಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಧಕ್ಕೆಯಾಗಿದೆ. ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಜನರು ಹೆದರಿದ್ದಾರೆ. ಬಿಜೆಪಿ ಮಾತ್ರವಲ್ಲದೇ ಇತರ ಪಕ್ಷಗಳ ಕಾರ್ಯಕರ್ತರಿಗೂ ಇದರಿಂದ ಹಾನಿಯಾಗಿದೆ. ಆದರೆ ಪಶ್ಚಿಮ ಬಂಗಾಳದಲ್ಲಿ ಆಡಳಿತದಲ್ಲಿರುವ ಪಕ್ಷದವರನ್ನು ಹೊರತುಪಡಿಸಿ ಬೇರೆ ಎಲ್ಲರಿಗೂ ತೊಂದರೆಯಾಗಿದೆ ಎಂದು ಮೋದಿ ಆರೋಪಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ