ನಾವ್ಯಾಕೆ ರೆಸಾರ್ಟ್ ಗೆ ಹೋಗೋಣ: ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು,ಮೇ 16

ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಸರ್ಕಾರ ರಚನೆ ಮಾಡಲಿದೆ. ಬಿಜೆಪಿಯ ಆಪರೇಷನ್ ಕಮಲದ ಬಗ್ಗೆ ಮಾಹಿತಿ ನನಗಿಲ್ಲ. ನಾವ್ಯಾಕೆ ರೆಸಾರ್ಟ್ ಗೆ ಹೋಗಬೇಕೆಂದು ಹಂಗಾಮಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬುಧವಾರ ಕಾಂಗ್ರೆಸ್-ಜೆಡಿಎಸ್ ಶಾಸಕಾಂಗದ ಸಭೆ ನಡೆಯಲಿದೆ. ಸಭೆಯಲ್ಲಿ ಒಮ್ಮತದ ತೀರ್ಮಾಣ ತೆಗೆದುಕೊಳ್ಳಲಾಗುವುದು. ಈಗಾಗಲೇ ರಾಜ್ಯಪಾಲರಿಗೆ ಸರ್ಕಾರ ರಚನೆ ಮಾಡಲಿದ್ದೇವೆ ಎಂದು ಪತ್ರ ಬರೆಯಲಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ದೇವೇಗೌಡರಿಗೂ ನಮ್ಮ ಬೆಂಬಲವಿದೆ ಎಂದು ಪತ್ರದ ಮೂಲಕ ತಿಳಿಸಿದ್ದೇವೆ ಎಂದೂ ಸ್ಪಷ್ಟಪಡಿಸಿದರು.

ಇನ್ನು ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯರ ಆರೋಪಗಳಿಗೆ ಪ್ರತಿಕ್ರಿಯಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ರಾಜಕೀಯದಲ್ಲಿ ಆರೋಪ ಪ್ರತ್ಯಾರೋಪ ಮಾಡೋದು ಸಹಜ. ಆದರೆ ಆ ವಿಚಾರ ಈಗ ಅಪ್ರಸ್ತುತ. ಜೆಡಿಎಸ್ ಪಕ್ಷ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲಿದೆ. ಸರ್ಕಾರ ರಚನೆಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಿದೆ. ಯಾವ ಆಪರೇಷನ್ ಕಮಲ ಕೂಡ ನಡೆಯಲ್ಲ ಎಂದರು.

 

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ