
ತುಮಕೂರು, ಮೇ 17- ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು.
ಭದ್ರಮ್ಮ ವೃತ್ತದ ಬಳಿ ಇರುವ ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ನಂತರ ಟೌನ್ಹಾಲ್ ವೃತ್ತದವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಸರಳ ಬಹುಮತ ತೋರಿಸಿದ್ದರೂ ಕಾಂಗ್ರೆಸ್-ಜೆಡಿಎಸ್ನವರಿಗೆ ಸರ್ಕಾರ ರಚಿಸಲು ಅವಕಾಶ ನೀಡದೆ ಬಹುಮತ ಸಾಬೀತುಪಡಿಸದ ಬಿಜೆಪಿಗೆ ಅಧಿಕಾರ ಹಿಡಿಯಲು ಅವಕಾಶ ನೀಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಅಧ್ಯಕ್ಷ ಕೆಂಚಮಾರಯ್ಯ ಮತ್ತಿತರರು ನೇತೃತ್ವ ವಹಿಸಿದ್ದರು.