ಬೆಂಗಳೂರು,ಮೇ 17
ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ್ದನ್ನು ಖಂಡಿಸಿ ವಿಧಾನಸೌಧ ಆವರಣದಲ್ಲಿನ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.
ಕಾಂಗ್ರೆಸ್ ಮುಖಂಡರಾದ ಸಿದ್ದರಾಮಯ್ಯ, ಗುಲಾಂ ನಬಿ ಆಜಾದ್, ಅಶೋಕ್ ಗೆಹ್ಲೋಟ್ , ಈಶ್ವರ್ ಖಂಡ್ರೆ, ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್, ಜಿ. ಪರಮೇಶ್ವರ್ ಸೇರಿದಂತೆ ಹಲವು ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಯಾರಿಗೆ ಬಹುಮತ ಇದೆಯೋ ಆ ಪಕ್ಷಕ್ಕೆ ಸರ್ಕಾರ ರಚಿಸಲು ಅವಕಾಶ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹಲವು ಬಾರಿ ತೀರ್ಪು ನೀಡಿದೆ. ಅದರಂತೆ ಯಡಿಯೂರಪ್ಪ ನವರು 112 ಶಾಸಕರ ಬೆಂಬಲ ತೋರಿಸಬೇಕಿದೆ. ಆದರೆ ಅವರಿಗೆ ಸಂಖ್ಯಾ ಬಲವೇ ಇಲ್ಲ. ಇದು ಕುದುರೆ ವ್ಯಾಪಾರಕ್ಕೆ ದಾರಿ ಮಾಡಿಕೊಡುತ್ತದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಆಕ್ರೋಶ ವ್ಯಕ್ತಪಡಿಸಿದರು.