ಕೋಲ್ಕತ್ತಾ, ಮೇ 17- ಹಲವೆಡೆ ಹಿಂಸಾಚಾರ ಮತ್ತು ಘರ್ಷಣೆಗಳ ನಡುವೆಯೂ ಪಶ್ಚಿಮ ಬಂಗಾಳದ ಪಂಚಾಯಿತಿ ಚುನಾವಣೆಗಳ ಮತ ಎಣಿಕೆ ಕಾರ್ಯ ಬಿಗಿ ಭದ್ರತೆಯಿಂದ ನಡೆದಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷವು 2500ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಲ್ಲಿ ಗೆಲುವು ಸಾಧಿಸಿದೆ. ಅಲ್ಲದೆ, 2700ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ ಮತ್ತು ಸಿಪಿಎಂ ಪಕ್ಷಗಳು ಅನುಕ್ರಮವಾಗಿ 2 ಮತ್ತು 3ನೆ ಸ್ಥಾನದಲ್ಲಿವೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಈಗಾಗಲೇ 20 ಸಾವಿರಕ್ಕೂ ಹೆಚ್ಚು ಪಂಚಾಯಿತಿ ಸ್ಥಾನಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಿದೆ.